ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು
ಸಾಲಬಾಧೆ ಮತ್ತು ಬೆಳೆ ನಷ್ಟದಿಂದ ಮನನೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಂಜುನಾಥ್ ( 36 ) ಎಂದು ಗುರುತಿಸಲಾಗಿದೆ.
ಮಂಜುನಾಥ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಸಮಯದಲ್ಲಿ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅವರ ಮೆಕ್ಕೆಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು.
ಕೃಷಿ ನಷ್ಟದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಮಂಜುನಾಥ್, ಸಾಲದ ಒತ್ತಡವನ್ನು ತಾಳಲಾರದೆ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.