POSTMAN NEWS

ನೈಜ ಸುದ್ದಿ ನೇರ ಬಿತ್ತರ..

RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

JPEG 20250802 160733 926975528667996951 wm

RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್‌ ಮುಂಭಾಗದಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವನ ಖಚಿತ ಗುರುತು ಇನ್ನೂ ಪತ್ತೆಯಾಗಿಲ್ಲ.

ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಸ್ಥಳೀಯರ ಹೇಳಿಕೆಯಂತೆ, ಮೃತ ವ್ಯಕ್ತಿ ಹಾನಗಲ್ ಮೂಲದವನೆಂದು ಹೇಳಿಕೊಳ್ಳುತಿದ್ದು ಕಳೆದ ಕೆಲವು ದಿನಗಳಿಂದ ರಿಪ್ಪನ್ ಪೇಟೆ ವ್ಯಾಪ್ತಿಯ ಅಂಗಡಿ ಕಟ್ಟೆಗಳಲ್ಲಿ ವಾಸವಿದ್ದು, ತೀವ್ರ ಮದ್ಯವ್ಯಸನಿಯಾಗಿದ್ದರು. ಪ್ರತಿದಿನವೂ ಬಾರ್‌ ಬಳಿ ತೀವ್ರ ಮದ್ಯಪಾನ ಮಾಡುತ್ತಿದ್ದು, ಆರೋಗ್ಯ ಹದಗೆಟ್ಟು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮೇಲ್ಕಂಡ ಮೃತ ವ್ಯಕ್ತಿಯ ಬಗ್ಗೆ ಮಾಹಿತಿಯಿದ್ದಲ್ಲಿ ರಿಪ್ಪನ್ ಪೇಟೆ ಪೊಲೀಸ್ ಠಾಣೆ ಗೆ ಸಂಪರ್ಕಿಸಲು ಪೊಲೀಸ್ ಇಲಾಖೆ ಕೋರಿದೆ
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.