RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ಮುಂಭಾಗದಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವನ ಖಚಿತ ಗುರುತು ಇನ್ನೂ ಪತ್ತೆಯಾಗಿಲ್ಲ.
ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಸ್ಥಳೀಯರ ಹೇಳಿಕೆಯಂತೆ, ಮೃತ ವ್ಯಕ್ತಿ ಹಾನಗಲ್ ಮೂಲದವನೆಂದು ಹೇಳಿಕೊಳ್ಳುತಿದ್ದು ಕಳೆದ ಕೆಲವು ದಿನಗಳಿಂದ ರಿಪ್ಪನ್ ಪೇಟೆ ವ್ಯಾಪ್ತಿಯ ಅಂಗಡಿ ಕಟ್ಟೆಗಳಲ್ಲಿ ವಾಸವಿದ್ದು, ತೀವ್ರ ಮದ್ಯವ್ಯಸನಿಯಾಗಿದ್ದರು. ಪ್ರತಿದಿನವೂ ಬಾರ್ ಬಳಿ ತೀವ್ರ ಮದ್ಯಪಾನ ಮಾಡುತ್ತಿದ್ದು, ಆರೋಗ್ಯ ಹದಗೆಟ್ಟು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…