ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ
ಶಿಕಾರಿಪುರ: ಸದಾಶಿವಪುರ ತಾಂಡದಲ್ಲಿ ಇಂದು ಮುಂಜಾನೆ ಆನವಟ್ಟಿಗೆ ಹೊರಟಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೆರೆಯಲ್ಲಿ ಬಿದ್ದ ಅಪಘಾತ ನಡೆದಿದೆ.
ಪ್ರಯಾಣಿಸುತ್ತಿದ್ದ ವೇಳೆ ಬಸ್ ಮೊದಲು ಕೆರೆಯ ದಡದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ನೀರಿಗೆ ಜಾರಿದೆ. ಈ ಅವಘಡದಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾರಿಗೂ ಹೆಚ್ಚಿನ ಅನಾಹುತವಾಗಿಲ್ಲ.
ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಶಿವಮೊಗ್ಗದಿಂದ ಬನವಾಸಿಗೆ ತೆರಳುತ್ತಿದ್ದು, ನ್ಯಾಮತಿ – ಶಿಕಾರಿಪುರ – ಶಿರಾಳಕೊಪ್ಪ – ಸೊರಬ ಮಾರ್ಗವಾಗಿ ಸಂಚರಿಸುತ್ತಿತ್ತು ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…