January 11, 2026

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ.

ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ನೂರು ಮೀಟರ್ ನಷ್ಟು ಬೈಕ್ ಸಮೇತ ಎಳೆದೋಯ್ಯಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ..

About The Author

Exit mobile version