ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ
ಸಾಲದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಗ್ರಾಮದಲ್ಲಿ ನಡೆದಿದೆ.
ಹೊಸ ಮನೆ ನಿರ್ಮಾಣಕ್ಕೆ ಸಾಲ ಮಾಡಿಕೊಂಡಿದ್ದ ದಂಪತಿ ಸಾಲ ತೀರಿಸಲಾಗದೆ ಭಾನುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುಂಡಾ ನಾಯ್ಕ(72), ಲಕ್ಷ್ಮಮ್ಮ(58) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಕೂಲಿ ಕಾರ್ಮಿಕರಾಗಿದ್ದ ದಂಪತಿಗೆ ಇಬ್ಬರು ಪುತ್ರರಿದ್ದಾರೆ , ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲದ ವಿಚಾರವಾಗಿ ದಂಪತಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.