Headlines

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!??

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ.
ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ.
ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ.

ಗುರುವಾರ ಘಟನೆಯ ಬಗ್ಗೆ ತಿಳಿಯುತಿದ್ದಂತೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಕೂಡಲೇ ಸ್ಥಳಕ್ಕೆ  ಭೇಟಿ ನೀಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಹೊಸನಗರ ಆಸ್ಪತ್ರೆಗೆ ದಾಖಲಿಸಿದ್ದರು ಹಾಗೂ ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದರು.

ಈ ಹೃದಯವಿದ್ರಾವಕ ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾಮಾಜಿಕ ಜಾಲತಾಣ ಎಕ್ಸ್ (ಹಳೆಯ ಟ್ವಿಟ್ಟರ್) ಮತ್ತು ಫೇಸ್‌ಬುಕ್‌ನಲ್ಲಿ ಈ ಬಗ್ಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಇದು ಮಾನವೀಯತೆ ವಿರೋಧಿ ಕ್ರಿಯೆ. ಇಂತಹ ದುಷ್ಕೃತ್ಯಕ್ಕೆ ಕಾರಣಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಅವರು ಹೇಳಿದ್ದಾರೆ.

Exit mobile version