HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು ಸಾವು
ಹೊಸನಗರ: ತಾಲೂಕಿನ ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ.
ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು.
ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದ ಕಾರಣ ಗುರುವಾರ ರಾತ್ರಿ ಮನೆಗೆ ಕರೆತರುತ್ತಿರುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…