ಆಟೋ ಕಾಂಪ್ಲೆಕ್ಸ್‌ನಲ್ಲಿ ಗ್ಯಾರೇಜ್ ಗೆ ಬೆಂಕಿ – ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿ
ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್‌ನ ಮನು ಶೆಟ್ಟಿ ಎಂಬುವವರ ಗ್ಯಾರೇಜ್‌ನಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ದಟ್ಟ ಹೊಗೆ ಆವರಿಸಿ ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ಬೆಂಕಿಯನ್ನು ಆರಿಸಲು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅವಘಡದಲ್ಲಿ ಡಸ್ಟರ್ ಹಾಗೂ ಇಕೋ ಸ್ಪೋರ್ಟ್ಸ್ ಕಾರುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು,ಟಾಟಾ ಸುಮೋ ವಾಹನ ಅರ್ಧದಷ್ಟು ಹಾನಿಗೊಳಗಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಘಟನೆ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.