ಧರ್ಮಸ್ಥಳದಲ್ಲಿ‌ ನಾಲ್ವರು ಯೂಟ್ಯೂಬರ್ ಗಳ ಮೇಲೆ ಮಾರಣಾಂತಿಕ ಹಲ್ಲೆ

ಧರ್ಮಸ್ಥಳದಲ್ಲಿ‌ ನಾಲ್ವರು ಯೂಟ್ಯೂಬರ್ ಗಳ ಮೇಲೆ ಮಾರಣಾಂತಿಕ ಹಲ್ಲೆ

Four YouTubers attacked in Dharmasthala

ಧರ್ಮಸ್ಥಳ: ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಸುಮಾರು 60-70 ಜನರಿದ್ದ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ.

ಧರ್ಮಸ್ಥಳದ ಸಮೀಪದ ಸೌಜನ್ಯ ಅವರ ಮನೆಯ ಬಳಿ ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ದಾಳಿಗೆ ಒಳಗಾದವರು ಕುಡ್ಲ ರ್ಯಾಂಪೇಜ್ ಯೂಟ್ಯೂಬ್ ಚಾನೆಲ್‌ನ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲ ರ್ಯಾಂಪೇಜ್‌ನ ಕ್ಯಾಮೆರಾ ಪರ್ಸನ್ ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ ಇವರಿಗೆ ತೀವ್ರ ಗಾಯಗಳಾಗಿದ್ದು, ಅವರ ಕ್ಯಾಮೆರಾ ಮತ್ತು ಇತರ ಉಪಕರಣಗಳನ್ನು ಧ್ವಂಸ ಮಾಡಲಾಗಿದೆ.

ಬಿಗ್‌ಬಾಸ್ ಕನ್ನಡ ರಿಯಾಲಿಟಿ ಶೋನ ಸ್ಪರ್ಧಿ ರಜತ್ ಅವರು ಸೌಜನ್ಯ ಅವರ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಅವರನ್ನು ಸಂದರ್ಶನ ಮಾಡಲು ಈ ಯೂಟ್ಯೂಬರ್‌ಗಳು ತೆರಳಿದ್ದರು.

ಸೌಜನ್ಯ ಅವರ ಮನೆಯ ಪಾಂಗಳ ಕ್ರಾಸ್ ಸಮೀಪ ಈ ಸಂದರ್ಶನ ನಡೆಯುತ್ತಿದ್ದಾಗ, ಸುಮಾರು 50 ರಿಂದ 100 ಜನರ ದೊಡ್ಡ ಗುಂಪು ಇವರ ಮೇಲೆ ಹಠಾತ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ದಾಳಿ ನಡೆಸಿದವರು “ಧರ್ಮಸ್ಥಳದ ಹೆಸರು ಕೆಡಿಸುತ್ತಿದ್ದೀರಿ” ಎಂದು ಆರೋಪಿಸಿ, ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದಾಳಿಯಲ್ಲಿ ಗಾಯಗೊಂಡ ಎಲ್ಲರನ್ನು ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಅವರೊಂದಿಗೆ ಮಾತನಾಡಿದ ಹೋರಾಟಗಾರರ ಪ್ರಕಾರ, ಘಟನೆ ನಡೆದು ಅರ್ಧ ಗಂಟೆಯಷ್ಟೇ ಆಗಿದ್ದು, ತಕ್ಷಣವೇ ಉನ್ನತ ಮಟ್ಟದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಗೂಂಡಾಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯನ್ನು ಕರ್ನಾಟಕದ ಡಿಜಿಟಲ್ ಮಾಧ್ಯಮಗಳ ವೇದಿಕೆಯಾದ ಡಿಜಿಟಲ್ ಮೀಡಿಯಾ ಫಾರ್ ಡೆಮಾಕ್ರಸಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಈ ಘಟನೆಯು ಕರ್ನಾಟಕದಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿಯಾಗಿದೆ ಎಂದು ವ್ಯಾಪಕವಾಗಿ ಖಂಡಿಸಲಾಗುತ್ತಿದೆ.

Four YouTubers attacked in Dharmasthala

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago