ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ
ರಿಪ್ಪನ್‌ಪೇಟೆ : ಸ್ಥಳೀಯ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ಪಟ್ಟಣದಲ್ಲಿ ಭವ್ಯವಾಗಿ ಜರುಗಿತು. ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸಿದ ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಠಾಪನಾ ಪೂಜೆ ಭಕ್ತಿಭಾವದಿಂದ ಆರಂಭವಾಯಿತು.
ವಿನಾಯಕ ವೃತ್ತದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಹಾಗೂ ಸಮಿತಿಯ ಅಧ್ಯಕ್ಷ ಸುಧೀರ್ ಪಿ. ನೆರವೇರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಮುಖಂಡರಾದ ಎಂ.ಬಿ. ಮಂಜುನಾಥ, ಎಂ. ಸುರೇಶಸಿಂಗ್, ಆರ್. ರಾಘವೇಂದ್ರ, ಕಾರ್ಯದರ್ಶಿ ಮುರುಳಿಧರ, ಲಕ್ಷ್ಮಣ ಆಟೋ, ರಾಮಚಂದ್ರ ಬಳೆಗಾರ್, ಶ್ರೀನಿವಾಸ ಆಚಾರ್, ಜಯಲಕ್ಷ್ಮಿ, ವೀರಭದ್ರಪ್ಪ, ನಾಗರಾಜ ಪವಾರ್, ರಾಘವೇಂದ್ರ, ಶ್ರೀಧರ, ವೈ.ಜೆ. ಕೃಷ್ಣ, ಸಂತೋಷ, ನವೀನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಗಣಪತಿ ಹಬ್ಬದ ಅಂಗವಾಗಿ ಮುಂದಿನ 11 ದಿನಗಳಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…