Headlines

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ, ಆ.5 – ದಾವಣಗೆರೆ ಮೂಲದ 29 ವರ್ಷದ ಯುವಕನೊಬ್ಬನು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಕಾಲಿಕ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಬಸಾಪುರ ಗ್ರಾಮದ ಕೆಂಪನಹಳ್ಳಿ ರವೀಂದ್ರರ ಪುತ್ರ ಕೆ. ಆಕರ್ಷ್ (29) ಮೃತಪಟ್ಟ ದುರ್ಧೈವಿಯಾಗಿದ್ದಾರೆ.

ಆಕರ್ಷ್ ತಮ್ಮ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದಾಗ ಸಾಗರ ತಾಲ್ಲೂಕಿನ ಬಲಸಗೋಡು ಗ್ರಾಮದ ಸಮೀಪ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ತೀವ್ರ ಅಸ್ವಸ್ಥರಾಗಿದ್ದಾರೆ. ಚಿಕಿತ್ಸೆಗೂ ಮುನ್ನವೇ ಅವರು ಪ್ರಾಣ ಬಿಟ್ಟಿದ್ದಾರೆ.

ಆಕರ್ಷ್ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಪ್ರಭಾ ಮಲ್ಲಿಕಾರ್ಜುನ ರವರ ಆಪ್ತ ಸಹಾಯಕ ಹರೀಶ್ ಬಸಾಪುರರ ಸಹೋದರನ ಪುತ್ರರಾಗಿದ್ದರು.

ಮೃತದೇಹವನ್ನು ಸಾಗರ ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.ಈ ದುರ್ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.