January 11, 2026

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸುವಂತೆ ನಾಳೆ (ಆಗಸ್ಟ್ 28, ಗುರುವಾರ) ರಜೆ ಘೋಷಿಸಲಾಗಿದೆ.

ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಶ್ಮೀ ಹಾಲೇಶ್ ತಿಳಿಸಿದ್ದಾರೆ.

About The Author

Exit mobile version