POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ

Images 2025 08 29T085713.611

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ.

ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ಇನ್ನಷ್ಟು ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಶ್ಮೀ ಹಾಲೇಶ್ ತಿಳಿಸಿದ್ದಾರೆ.

ತೀರ್ಥಹಳ್ಳಿ : ಆ.29ರಂದು ಶಿವಮೊಗ್ಗ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ: ಆ.29ರಂದು ಶಿವಮೊಗ್ಗ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಶಿಕಾರಿಪುರ: ಆ.29ರಂದು ಶಿಕಾರಿಪುರ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸೊರಬ: ಆ.29ರಂದು ಹೊಸನಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರಾಥಮಿಕ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.