HOSANAGARA | ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ನಗದು ಚಿನ್ನಾಭರಣ ವಶಕ್ಕೆ!

ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ಚಿನ್ನ ವಶ!

ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಬಳೆ ಹಾಗೂ ಮಾಸ್ತಿಕಟ್ಟೆ ಪ್ರದೇಶದಲ್ಲಿ ಆಗಸ್ಟ್ 21ರಂದು ಸಂಭವಿಸಿದ ಕಳ್ಳತನ ಪ್ರಕರಣವನ್ನು ಪಿಎಸೈ ಶಿವಾನಂದ ಕೆ ನೇತ್ರತ್ವದ ಪೊಲೀಸರು ಕೇವಲ 48 ಗಂಟೆಗಳಲ್ಲಿ ಪ್ರಕರಣ ಭೇದಿಸಿ, ಇಬ್ಬರು ಅಂತರ ಜಿಲ್ಲೆ ಆರೋಪಿಗಳನ್ನು ದಸ್ತಗಿರಿ ಮಾಡಿದೆ.

ನಗರ ಹೋಬಳಿಯ ಕಬಳೆ ಗ್ರಾಮದ ರಿಚರ್ಡ್ ಡಿ ಸೋಜಾ ಹಾಗೂ ಮಾಸ್ತಿಕಟ್ಟೆ ಗ್ರಾಮದ ಶೇಷಾದ್ರಿ ಇವರ ಮನೆಯಲ್ಲಿ 21-08-2024 ರಂದು ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಬೀಗ ಒಡೆದು ಮನೆಗಳ ಗಾಡೇಜ್‌ನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದರು.ರಿಚರ್ಡ್ ಡಿ ಸೋಜಾ ಅವರ ಮನೆಯಿಂದ 31 ಗ್ರಾಂ ತೂಕದ ಚಿನ್ನಾಭರಣ (ಮೌಲ್ಯ ₹1,66,000) ಹಾಗೂ ₹70,000 ನಗದು ಕಳ್ಳತನವಾಗಿತ್ತು ಹಾಗೂ ಮಾಸ್ತಿಕಟ್ಟೆಯ ಶೇಷಾದ್ರಿಯವರ ಮನೆಯಿಂದ 28 ಗ್ರಾಂ ಚಿನ್ನಾಭರಣ (ಮೌಲ್ಯ ₹1,11,000), ₹30,000 ನಗದು ಮತ್ತು ₹3,000 ಬೆಳ್ಳಿ ಆಭರಣ ದೋಚಲ್ಪಟ್ಟಿತು.

ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 41/2025 ಮತ್ತು 42/2025ರಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾಗುತಿದ್ದಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ.ಕೆ. (ಐಪಿಎಸ್) ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ವಿ.ಜಿ. ಮತ್ತು ರಮೇಶ್ ಅವರ ಸಹಕಾರದಿಂದ ತೀರ್ಥಹಳ್ಳಿ ಉಪವಿಭಾಗದ ಡಿ.ವೈ.ಎಸ್.ಪಿ ಅರವಿಂದ ಎನ್. ಕಲಗುಜ್ಜಿ ಹಾಗೂ ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್. ಹೆಬ್ಬಾಳ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಯಿತು.

ನಗರ ಪೊಲೀಸ್ ಠಾಣೆಯ ಪಿಎಸ್‌ಐ ಶಿವಾನಂದ ಕೋಳಿ ಹಾಗೂ ಅವರ ಸಿಬ್ಬಂದಿಗಳು, ಬೆರಳಚ್ಚು ವಿಭಾಗ ಹಾಗೂ ಎ.ಎನ್.ಸಿ. ತಂಡದ ತಾಂತ್ರಿಕ ಸಹಕಾರದಿಂದ ಪತ್ತೆ ಕಾರ್ಯಾಚರಣೆಯಲ್ಲಿ ಕೈಗೊಂಡು ಆಗಸ್ಟ್ 24ರಂದು ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ನಿವಾಸಿಗಳಾದ ಹನುಮಂತ ತೊಳೆಯಪ್ಪ ಕುಂಚಿಕೊರವರ (26 ವರ್ಷ) , ಮಂಜುನಾಥ ಬಿಸುಕಲ್ಲೊಡ್ಡರ (36 ವರ್ಷ) ಎಂಬ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ದಸ್ತಗಿರಿ ಮಾಡಿ, ಅವರಿಂದ ಒಟ್ಟು 55 ಗ್ರಾಂ ಚಿನ್ನಾಭರಣ (ಮೌಲ್ಯ ಸುಮಾರು ₹4 ಲಕ್ಷ) ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟಿ (ಮೌಲ್ಯ ₹70,000) ವಶಪಡಿಸಿಕೊಂಡಿದೆ.

ಆರೋಪಿಗಳನ್ನು ಕೇವಲ 48 ಗಂಟೆಗಳಲ್ಲಿ ಪತ್ತೆಹಚ್ಚಿ, ಕಳುವಾದ ಆಭರಣ-ಸ್ವತ್ತುಗಳನ್ನು ವಶಪಡಿಸಿಕೊಂಡ ಶಿವಾನಂದ ಕೆ ನೇತ್ರತ್ವದ ತಂಡದ ಕಾರ್ಯಕ್ಷಮತೆಯನ್ನು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ಪ್ರಶಂಸಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ಶಿವಾನಂದ ಕೋಳಿ ಅವರ ನೇತೃತ್ವದಲ್ಲಿ, ಎ.ಎಸ್.ಐ ಕುಮಾರ್ ಟಿ, ಎ.ಎಸ್.ಐ ಶೇಖ್ ಅಮೀರ್ ಜಾನ್, ಸಿ.ಹೆಚ್.ಸಿ ಕಿರಣ್ ಕುಮಾರ್ ಡಿ, ಸಿ.ಹೆಚ್.ಸಿ ವಿಶ್ವನಾಥ್ ಡಿ, ಹೆಚ್.ಸಿ ಪ್ರವೀಣ್ ಕುಮಾರ್ ಬಿ.ಎಸ್, ಸಿ.ಹೆಚ್.ಸಿ ಶಿವಕುಮಾರ ನಾಯ್ಕ (ಹೊಸನಗರ ಠಾಣೆ), ಸಿಪಿಸಿ ರವಿಚಂದ್ರ, ಸಿಪಿಸಿ ಸುಜಯಕುಮಾರ್ ಎಂ, ಸಿಪಿಸಿ ಪ್ರಜ್ವಲ್ ಡಿ.ಎಸ್, ಸಿಪಿಸಿ ಸಚಿನ್, ಚಾಲಕ ಶಶಿಧರ ಎನ್ ಸೇರಿದಂತೆ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಅದೇ ರೀತಿ ಬೆರಳಚ್ಚು ವಿಭಾಗ ಶಿವಮೊಗ್ಗ ಹಾಗೂ ಜಿಲ್ಲಾ ಎ.ಎನ್.ಸಿ. ಸಿಬ್ಬಂದಿ ತಾಂತ್ರಿಕ ಸಹಕಾರ ನೀಡಿದ್ದು, ಪ್ರಕರಣವನ್ನು ಕೇವಲ 48 ಗಂಟೆಗಳಲ್ಲಿ ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಲಾಯಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

20 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

21 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 days ago