ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ
ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ ಗಣಪತಿ ಸಮಿತಿ ಹಾಗೂ ಈದ್ ಮಿಲಾದ್ ಸಮಿತಿ ಸದಸ್ಯರು, ಮುಖಂಡರುಗಳು ಮತ್ತು ಸಾರ್ವಜನಿಕರು ತಪ್ಪದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಲು ಕೋರಲಾಗಿದೆ.