ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ
ಶಿವಮೊಗ್ಗ : ಆಗಸ್ಟ್ 21 : : ಆಗಸ್ಟ್‌ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್‌ಅಚರಿಸಲಿರುವ ಈದ್‌ಮಿಲಾದ್‌ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.
ಅವರು ಇಂದು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಎಲ್ಲಾ ಧರ್ಮ ಬಂಧುಗಳ ಮೆರವಣಿಗೆಗಳು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಆಯ್ದ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ. ನಗರದೆಲ್ಲೆಡೆ ಸ್ವಚ್ಚತೆ, ವಿದ್ಯುತ್‌ದೀಪ ನಿರಂತರವಾಗಿರುವಂತೆ ಕ್ರಮ ವಹಿಸಲಾಗಿದೆ ಎಂದವರು ನುಡಿದರು.
ಈ ಎಲ್ಲಾ ಸಿದ್ಧತೆಗಳಿಗಾಗಿ ಮಹಾನಗರಪಾಲಿಕೆ, ಕಂದಾಯ ಇಲಾಖೆ, ಪೊಲೀಸ್‌ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಸಹಕಾರ ಪಡೆದುಕೊಳ್ಳಲಾಗಿದೆ. ಹಬ್ಬದ ಎಲ್ಲಾ ಸಂದರ್ಭಗಳಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಸಂಘಟನೆಗಳ ಮುಖಂಡರು ವಿಶೇಷ ಗಮನಹರಿಸಬೇಕು ಅಲ್ಲದೇ ಸರ್ಕಾರದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದವರು ನುಡಿದರು.
ಎಲ್ಲೆಂದರಲ್ಲಿ ಬ್ಯಾನರ್‌ಗಳನ್ನು ಅಳವಡಿಸಿ,ನಗರದ ಸೌಂದರ್ಯ ಹಾಳು ಮಾಡದಂತೆ ಹಾಗೂ ಪಾಲಿಕೆಯ ಅನುಮತಿ ಪಡೆದೇ ಬ್ಯಾನರ್‌ಗಳನ್ನು ಅಳವಡಿಸಬೇಕು ಎಂದ ಅವರು, ಮೆರವಣಿಗೆಯಲ್ಲಿ ಬೈಕ್‌ರ್ಯಾಲಿ ನಡೆಸದಂತೆ, ಡಿ.ಜೆ.ಧ್ವನಿವರ್ಧಕಗಳನ್ನು ಬಳಸಿ ಮೆರವಣಿಗೆ ಮಾಡದಂತೆ, ಹಸಿರು ಪಟಾಕಿಗಳನ್ನೇ ಬಳಸುವಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಗಣಪತಿ ವಿಸರ್ಜನೆಗೆ ನೀರಿಗಿಳಿಯುವವರು ಈಜು ಬಲ್ಲವರಾಗಿದ್ದು, ಮೂರ್ನಾಲ್ಕು ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನ ನೀರಿಗೆ ಇಳಿಯಬಾರದು. ಅಲ್ಲದೇ ಲೈವ್‌ಜಾಕೇಟ್‌ಗಳನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದರು.
ಜಲಮೂಲಗಳು ಮತ್ತು ಪರಿಸರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಥರ್ಮೋಕೋಲ್, ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹಗಳನ್ನು ಪೂಜೆಗೆ ಬಳಸದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವದಂತಿಗಳಿಗೆ ಕಿವಿಗೊಡದಂತೆ ಹಾಗೂ ಶಾಂತಿ ಸಂಯಮದಿಂದ ವರ್ತಿಸುವಂತೆ ಅವರು ಸಲಹೆ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಜಿ.ಕೆ.ಮಿಥುನಕುಮಾರ್‌ಅವರು ಮಾತನಾಡಿ, ಮೆರವಣಿಗೆ ಮತ್ತಿತರ ಸಂದರ್ಭದಲ್ಲಿ ಅಸಹ್ಯಕರವಾಗಿ ವರ್ತಿಸುವವರ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದಲ್ಲದೇ ಕಾನೂನು ಕ್ರಮ ಜರುಗಿಸಲಾಗುವುದು. ನೆರೆಯ ಜಿಲ್ಲೆಗಳಿಂದ ಆಗಮಿಸುವವರ ಮೇಲೆ ವಿಶೇಷ ಗಮನಹರಿಸಲಾಗುವುದು. ಅದಕ್ಕಾಗಿ ನಗರದ ಹೊರವಲಯದಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ ಎಂದರು.
ಸಾರ್ವಜನಿಕರು ಈ ಎಲ್ಲಾ ಸಂದರ್ಭಗಳಲ್ಲಿ ತಾಳ್ಮೆ ಕಳೆದುಕೊಳ್ಳದೇ ಸೌಹಾರ್ಧಯುತವಾಗಿ ವರ್ತಿಸಬೇಕು. ತಪ್ಪು ಹೆಜ್ಜೆ ಇಟ್ಟಲ್ಲಿ ಕ್ರಮ ಅನಿವಾರ್ಯವಾಗಲಿದೆ. ಪರಸ್ಪರರಲ್ಲಿ ವಾಗ್ವಾದ ಸಲ್ಲದು. ಮುಖಂಡರು ಇಂತಹ ಸಂದರ್ಭದಲ್ಲಿ ಮದ್ಯ ಪ್ರವೇಶಿಸಿ, ವಾತಾವರಣ ತಿಳಿಗೊಳಿಸಲು ಯತ್ನಿಸಬೇಕು. ಅಗತ್ಯವಿದ್ದಲ್ಲಿ ಪೊಲೀಸ್‌ಸಹಕಾರ ಪಡೆಯುವಂತೆ ಸೂಚಿಸಿದ ಅವರು, ಹಬ್ಬದ ಮೆರವಣಿಗೆಗಳು ನಡೆಯುವ ದಿನಗಳಂದು ಭವಿಷ್ಯದ ಬದುಕು ಕಲ್ಪಿಸಿಕೊಳ್ಳಲು ಹೊರಟಿರುವ ವಿದ್ಯಾರ್ಥಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಕಾರಿಯಪ್ಪ, ರಮೇಶ್‌ಕುಮಾರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಸರ್ವಧರ್ಮಗಳ ಮುಖಂಡರುಗಳು ಉಪಸ್ಥಿತರಿದ್ದರು.