January 11, 2026

ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

ವಿಷ ಸೇವಿಸಿದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನ ಖಾಸಗಿ ಡಿಗ್ರಿ ಕಾಲೇಜಿನಲ್ಲಿ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿನಿಯಾದ ಅಶ್ವಿನಿ (19) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ.

ಅಶ್ವಿನಿ ಮೂಲತಃ ಯಡೂರಿನವಳಾಗಿದ್ದು, ಪ್ರತಿದಿನ ತೀರ್ಥಹಳ್ಳಿಗೆ ಹೋಗಿ ತರಗತಿಗೆ ಹಾಜರಾಗುತ್ತಿದ್ದಳು. ದಿನದಂದು ಏಕಾಏಕಿ ಅವಳು ವಿಷ ಸೇವಿಸಿದ್ದಳು. ವಿಷ ಸೇವನೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ.

ವಿಷ ಸೇವನೆ ಬಗ್ಗೆ ತಿಳಿದ ತಕ್ಷಣ ಆಕೆಯನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮೃತಪಟ್ಟಿದ್ದಾಳೆ

ಈ ಘಟನೆಯಿಂದ ಆಕೆಯ ಕುಟುಂಬ, ಸ್ನೇಹಿತರು ಹಾಗೂ ಕಾಲೇಜು ಸಹಪಾಠಿಗಳು ಆಘಾತಕ್ಕೆ ಒಳಗಾಗಿದ್ದಾರೆ. ಆತ್ಮಹತ್ಯೆಗೆ ಕಾರಣವಾದ ವಿಷಯವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author