Headlines

HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ತಾಲೂಕ್ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 08 ರಂದು ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದೆ.

ನಿಟ್ಟೂರು ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 11-30 ಕ್ಕೆ  ನಡೆಯುವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದು, ಹೊಸನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ಬಿದನೂರು ಅಧ್ಯಕ್ಷತೆ ವಹಿಸುವರು.

ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ , ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆರ್ ಎಂ ಮಂಜುನಾಥ್ ಗೌಡ ಹಾಗೂ ಪತ್ರಿಕಾ ವಿತರಕರಿಗೆ ಸನ್ಮಾನ ಕಾರ್ಯಕ್ರಮವನ್ನು ಶಿಮೂಲ್ ಅಧ್ಯಕ್ಷ ಹೆಚ್ ಎನ್ ವಿದ್ಯಾದರ್  ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ ವಿ ಶಿವಕುಮಾರ್ ,KUWJ ರಾಜ್ಯ ಸಮಿತಿ ಸದಸ್ಯರಾದ ರವಿಕುಮಾರ್ ಟೆಲೆಕ್ಸ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ಟಿ ಅರುಣ್ ಮುಖಂಡರಾದ ಚಿದಂಬರಂ , ಮಾಸ್ತಿಕಟ್ಟೆ ಸುಬ್ರಹ್ಮಣ್ಯ , ಹಾಲಗದ್ದೆ ಉಮೇಶ್ , ಕೆ ವಿ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.