ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ!
ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಶ್ರೀಗಂಧ ಕಳ್ಳ ಸಾಗಾಣಿಕೆ ಪತ್ತೆಯಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಮೂಕಬಲ್ (56) ಎಂಬಾತನು 14.300 ಗ್ರಾಂ ಶ್ರೀಗಂಧವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಡೆದು ಬಂಧಿಸಿದ್ದಾರೆ. ನಂತರ ಪ್ರಕರಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಈ ಕಾರ್ಯಾಚರಣೆಯಲ್ಲಿ ಸಾಗರ ವಲಯ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ ಹಾಗೂ ಸಿಬ್ಬಂದಿ ವರ್ಗ, ಜೊತೆಗೆ ತೀರ್ಥಹಳ್ಳಿ ಅರಣ್ಯಾಧಿಕಾರಿಗಳು ಭಾಗವಹಿಸಿ ಯಶಸ್ವಿ ದಾಳಿ ನಡೆಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್