ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್
ರಿಪ್ಪನ್ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು.
ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ ಒತ್ತಡದಲ್ಲಿ ಹಬ್ಬ ಹರಿದಿನಗಳಿಂದ ದೂರವಿರುವ ಪೊಲೀಸರು ಕರ್ತವ್ಯವೇ ದೇವರು ಎನ್ನುವಾಗ ನಾಗರಪಂಚಮಿ ಸಂಪತ್ತು ಶುಕ್ರವಾರ ಮಂಗಳಗೌರಿ ಹಬ್ಬ ಗಣೇಶ ಚತುರ್ಥಿ ಇಂತಹ ಹಬ್ಬಗಳಲ್ಲಿ ಮಹಿಳೆಯರು ತವರು ಮನೆಗೆ ಹೋಗಿ ಅರಿಶಿಣ ಕುಂಕುಮದೊಂದಿಗೆ ಬಾಗಿನ ಪಡೆಯುವುದು ಮುತ್ತೈದೆಯರಿಗೆ ಹಬ್ಬವೋ ಹಬ್ಬ ಆ ಕಾರಣ ಹೊಂಬುಜದ ಗ್ರಾಮ ಪಂಚಾಯ್ತಿ ಸದಸ್ಯೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ಸಹಿತ ಕಳೆದ 12 ವರ್ಷದಿಂದ ಈ ಕಾರ್ಯವನ್ನು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ.
ಯಶಸ್ವತಿ ವೃಷಭರಾಜ್ ಜೈನ್ ಕುಟುಂಬದವರು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿನ ಪಿಎಸ್ಐ ಸೇರಿದಂತೆ ಮತ್ತು ಸಿಬ್ಬಂದಿ ವರ್ಗದವರಿಗೆ ರಾಖಿ ಕಟ್ಟಿ ಪರಸ್ಪರ ಹಸ್ತಲಾಘವ ಮಾಡುವುದರೊಂದಿಗೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅರಿಶಿಣ ಕುಂಕುಮ ತಿಲಕವನ್ನಿಟ್ಟು ಬಾಗಿನದೊಂದಿಗೆ ಉಡಿತುಂಬಿ ಶುಭಹಾರೈಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್