Headlines

RIPPONPETE | ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

RIPPONPETE | ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

ರಿಪ್ಪನ್‌ಪೇಟೆ : ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು.

ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ರಾಘವೇಂದ್ರ ಅವರು ಅಭಿವೃದ್ಧಿ ಕಾರ್ಯದಲ್ಲಿ 543 ಸಂಸದರಲ್ಲಿ ಎರಡನೆಯ ಸ್ಥಾನವನ್ನು ಪಡೆದುಕೊಂಡಿದ್ದಾರೆ, ಲೋಕಸಭಾ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಅಭಿವೃದ್ಧಿ ಕಾರ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ, ಆರೋಗ್ಯ ಶಿಕ್ಷಣ, ಕೃಷಿ ಸಾಮಾಜಿಕ ಆರ್ಥಿಕ ಮತ್ತು ರೈಲ್ವೆ ಸಂಚಾರ ಅಭಿವೃದ್ಧಿಯಲ್ಲಿ ಮಹತ್ತರವಾದ ಅಭಿವೃದ್ಧಿಯನ್ನು ಮಾಡಿದ್ದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಸಂಸದರಾಗಿದ್ದರು ಕೂಡ ಜನಸಾಮಾನ್ಯರಲ್ಲಿ ಸಾಮಾನ್ಯರಾಗಿ ಇರುವುದರ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರ ಜನಮಾನಸದಲ್ಲಿ ಇದ್ದಾರೆ ಎಂದು ಹೇಳಿದರು.

ವಿಶೇಷ ಪೂಜೆಯಲ್ಲಿ ಬಿಜೆಪಿ ಪಕ್ಷದ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು.

Exit mobile version