ಶ್ರೀಗಂಧದ ತುಂಡು ಮಾರುತ್ತಿದ್ದ ಇಬ್ಬರ ಬಂಧನ
Two arrested for selling sandalwood
ಶಿವಮೊಗ್ಗ: ಶ್ರೀಗಂಧದ ಮರ ಕಡಿದು ಸಣ್ಣ ತುಂಡುಗಳನ್ನಾಗಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೊಡ್ಡಪೇಟೆ ಪೊಲೀಸರು ಅಶೋಕನಗರ ಚಾನಲ್ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ೧೫ ಸಾವಿರ ರೂ.ಮೌಲ್ಯದ ೩ ಕೆ.ಜಿ ೫೨೦ ಗ್ರಾಂ ತೂಕದ ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಸಾದಿಕ್ ಬೇಗ್ (೪೬) ಮತ್ತು ನಿಜಾಮುದ್ದಿನ್ (೫೨) ಬಂಧಿತರು.
ಅಶೋಕ ನಗರ ಚಾನಲ್ ಬಳಿ ಆರೋಪಿಗಳು ಮರದ ತುಂಡುಗಳನ್ನು ಚೀಲದಲ್ಲಿ ಇಟ್ಟುಕೊಂಡಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.
ದಾಳಿ ನಡೆಸಿದ ಪೊಲೀಸರು ಚೀಲವನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಅದರಲ್ಲಿ ಶ್ರೀಗಂಧದ ತುಂಡುಗಳಿದ್ದವು. ವಿಚಾರಣೆ ಮಾಡಿದಾಗ ಶರಾವತಿ ನಗರದ ಖಾಲಿ ನಿವೇಶನದಲ್ಲಿದ್ದ ಶ್ರೀಗಂಧದ ಮರವನ್ನು ಕಡಿದು, ಸಣ್ಣ ತುಂಡುಗಳಾಗಿ ಕತ್ತರಿಸಿ ಮಾರಾಟ ಮಾಡುತ್ತಿದ್ದುದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two arrested for selling sandalwood
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…