Headlines

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಅಪಘಾತವಾಗಿದ್ದು ಘಟನೆಯಲ್ಲಿ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.