ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಜ್ಜೆಗೆಹಳ್ಳಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ.
ಮಜ್ಜಿಗೆಹಳ್ಳಿ ಗ್ರಾಮದ ಸಮೀಪದ ಚಾನೆಲ್ ಬಳಿ, ಸುಮಾರು 35 ರಿಂದ 45 ವರ್ಷದೊಳಗಿನ ಮಹಿಳೆಯೊಬ್ಬರ ನಗ್ನ ಸ್ಥಿತಿಯ ಶವ ಪತ್ತೆಯಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಮೃತದೇಹವು ಈಗಾಗಲೇ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಗುರುತಿನ ಪತ್ತೆ ಇನ್ನೂ ಸಾಧ್ಯವಾಗಿಲ್ಲ. ಚಾನೆಲ್‌ನಿಂದ ಹೆಣ ತೇಲಿ ಬಂದಿರಬಹುದೆಂಬ ಶಂಕೆಯಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.
ಅನುಮಾನಾಸ್ಪದ ಸಾವಿನ ಪ್ರಕರಣವೆಂದು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ತಯಾರಿ ನಡೆಯುತ್ತಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.