ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು
ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ 1.06 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಶಿವಮೊಗ್ಗ ಜಿಲ್ಲೆಯ ವ್ಯಕ್ತಿಗೆ ಕರೆ ಮಾಡಿದ ಅಪರಿಚಿತನೊಬ್ಬ ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಿ ವಾಟ್ಸ್‌ಆಪ್ ಗ್ರೂಪ್‌ಗೆ ಸೇರುವಂತೆ ಲಿಂಕ್ ಕಳುಹಿಸಿದ್ದ.
ವಾಟ್ಸ್‌ಆಪ್ ಗ್ರೂಪ್‌ನಲ್ಲಿ ತನಿಷ್ಕಾ ಸನ್ಯಾಮ್ ಎಂದು ಪರಿಚಯ ಮಾಡಿಕೊಂಡು, ಟ್ರೇಡಿಂಗ್ ಮಾಡುವ ಮೊಬೈಲ್ ಆಯಪ್ ಲಿಂಕ್ ಕಳುಹಿಸಿದ್ದರು. ಅದರಲ್ಲಿ ಪೂರ್ಣ ವಿವರ ದಾಖಲಿಸುವಂತೆ ತಿಳಿಸಿದ್ದರು. ಅಂತೆಯೇ ಶಿವಮೊಗ್ಗದ ವ್ಯಕ್ತಿ ಸಂಪೂರ್ಣ ಮಾಹಿತಿ ದಾಖಲಿಸಿದ್ದರು ಎನ್ನಲಾಗಿದೆ.
ಕೊನೆಗೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಶಿವಮೊಗ್ಗದ ವ್ಯಕ್ತಿಯಿಂದ ಹಂತ ಹಂತವಾಗಿ 1.06 ಕೋಟಿ ರೂ. ಹೂಡಿಕೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕೊನೆಗೆ ಲಾಭಾಂಶದ ಹಣ ಮರಳಿಸುವಂತೆ ಕೇಳಿದಾಗ ವಿವಿಧ ಟ್ಯಾಕ್ಸ್‌ಗಳ ನೆಪ ಹೇಳಿದ್ದು, ಶಿವಮೊಗ್ಗದ ವ್ಯಕ್ತಿಗೆ ಅನುಮಾನ ಬಂದಿದೆ. ಈ ಹಿನ್ನೆಲೆ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…