January 11, 2026

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ರಂಜಿತಾ (28) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ, ಜಗುಲಿಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ರಂಜಿತಾ ಅವರು ಗಣಪತಿ ಹಬ್ಬದ ಪ್ರಯುಕ್ತ ತವರು ಮನೆಗೆ ಬಂದಿದ್ದರು. ಈ ಸಂದರ್ಭ ಮನೆಯವರಿಲ್ಲದ ವೇಳೆಯಲ್ಲಿ ಜಗುಲಿಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ.

ರಂಜಿತಾ ಅವರು ಮೊದಲು ವಿಚ್ಛೇದನ ಪಡೆದು ನಂತರ ಎರಡನೇ ಮದುವೆಯಾಗಿದ್ದರು. ಆದರೆ ವೈಯಕ್ತಿಕ ಜೀವನದಲ್ಲಿ ಎದುರಿಸಿದ ಸಂಕಷ್ಟಗಳಿಂದ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಮೃತರ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Exit mobile version