POSTMAN NEWS

ನೈಜ ಸುದ್ದಿ ನೇರ ಬಿತ್ತರ..

ನಕಲಿ ವೆಬ್‌ಸೈಟ್ ಮೂಲಕ ಶೃಂಗೇರಿ, ಹೊರನಾಡಿನ ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದವರ ಬಂಧನ

GridArt 20250930

ನಕಲಿ ವೆಬ್‌ಸೈಟ್ ಮೂಲಕ ಶೃಂಗೇರಿ, ಹೊರನಾಡಿನ ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದವರ ಬಂಧನ

ಶಿವಮೊಗ್ಗ: ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಕರ್ನಾಟಕದ  ಪ್ರತಿಷ್ಠಿತ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ತೆಲಂಗಾಣ  ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬವರನ್ನು ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದ ತಂಡ ಬಂಧಿಸಿದೆ.

ದೇವಸ್ಥಾನಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್  ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಸೇವೆಗೆ Www.Devaseva.com ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದಿದ್ದು, ಅದರ ಮೂಲಕ ದೇಶದ ಮತ್ತು ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರು ಬಳಸಿ ವಿಶೇಷ ಪೂಜೆ, ಪ್ರಸಾದ, ಸೇವೆಗಳ ಆರೋಪಿಗಳು ಹೆಸರಿನಲ್ಲಿ ಹಣ ಪಡೆದು ಭಕ್ತರನ್ನು ವಂಚಿಸುತ್ತಿದ್ದರು.

ವಿಶೇಷ ಪೂಜೆ, ಪ್ರಸಾದ, ಸೇವೆಗಳ ಹೆಸರಿನಲ್ಲಿ ವಂಚನೆ ನಡೆಯುತ್ತಿರುವ ಬಗ್ಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ನಿರಂತರವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ದೇವಾಲಯದ
ಉಪವ್ಯವಸ್ಥಾಪಕ ರಾಘವೇಂದ್ರ ಅವರು ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆ ಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಪೊಲೀಸರು ಪ್ರಕರಣ ಸಂಬಂಧ ತನಿಖೆ ಮುಂದುವರೆಸಿದ್ದು, ವಂಚನೆಗೆ ಒಳಗಾದ ಭಕ್ತರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

ಭಕ್ತರು ವಿಶೇಷ ಪೂಜೆ, ಪ್ರಸಾದ ಅಥವಾ ಸೇವೆಗಾಗಿ ಆನ್‌ಲೈನ್ ಮೂಲಕ ಹಣ ಪಾವತಿ ಮಾಡುವ ಮೊದಲು ದೇವಾಲಯಗಳ ಅಧಿಕೃತವೆಬ್‌ಸೈಟ್ ಅಥವಾ ದೇವಾಲಯ ನಿರ್ವಹಣಾ ಮಂಡಳಿಯನ್ನು ನೇರವಾಗಿ ಸಂಪರ್ಕಿಸಿ ಮಾಹಿತಿ ಪರಿಶೀಲಿಸುವುದು ಉತ್ತಮ. ಅನಧಿಕೃತ ವೆಬ್‌ಸೈಟ್‌ಗಳಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ ಅಥವಾ ಬ್ಯಾಂಕ್ ವಿವರಗಳನ್ನು ಹಂಚಬೇಡಿ. ಯಾವುದೇ ಸಂಶಯಾಸ್ಪದ ವೆಬ್‌ಸೈಟ್ ಅಥವಾ ವಂಚನೆ ಪ್ರಯತ್ನ ಕಂಡುಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಸೈಬರ್ ಕ್ರೈಂ (www.cybercrime.gov.in) ದೂರು ನೀಡಿ ಎಂದು ಸೈಬರ್ ಪೊಲೀಸರು ಸಲಹೆ ನೀಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.