ನಕಲಿ ವೆಬ್‌ಸೈಟ್ ಮೂಲಕ ಶೃಂಗೇರಿ, ಹೊರನಾಡಿನ ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದವರ ಬಂಧನ
ಶಿವಮೊಗ್ಗ: ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಕರ್ನಾಟಕದ ಪ್ರತಿಷ್ಠಿತ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ತೆಲಂಗಾಣ ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬವರನ್ನು ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದ ತಂಡ ಬಂಧಿಸಿದೆ.
ದೇವಸ್ಥಾನಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಸೇವೆಗೆ Www.Devaseva.com ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದಿದ್ದು, ಅದರ ಮೂಲಕ ದೇಶದ ಮತ್ತು ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರು ಬಳಸಿ ವಿಶೇಷ ಪೂಜೆ, ಪ್ರಸಾದ, ಸೇವೆಗಳ ಆರೋಪಿಗಳು ಹೆಸರಿನಲ್ಲಿ ಹಣ ಪಡೆದು ಭಕ್ತರನ್ನು ವಂಚಿಸುತ್ತಿದ್ದರು.
ವಿಶೇಷ ಪೂಜೆ, ಪ್ರಸಾದ, ಸೇವೆಗಳ ಹೆಸರಿನಲ್ಲಿ ವಂಚನೆ ನಡೆಯುತ್ತಿರುವ ಬಗ್ಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ನಿರಂತರವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ದೇವಾಲಯದ
ಉಪವ್ಯವಸ್ಥಾಪಕ ರಾಘವೇಂದ್ರ ಅವರು ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆ ಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಪೊಲೀಸರು ಪ್ರಕರಣ ಸಂಬಂಧ ತನಿಖೆ ಮುಂದುವರೆಸಿದ್ದು, ವಂಚನೆಗೆ ಒಳಗಾದ ಭಕ್ತರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.
ಭಕ್ತರು ವಿಶೇಷ ಪೂಜೆ, ಪ್ರಸಾದ ಅಥವಾ ಸೇವೆಗಾಗಿ ಆನ್‌ಲೈನ್ ಮೂಲಕ ಹಣ ಪಾವತಿ ಮಾಡುವ ಮೊದಲು ದೇವಾಲಯಗಳ ಅಧಿಕೃತವೆಬ್‌ಸೈಟ್ ಅಥವಾ ದೇವಾಲಯ ನಿರ್ವಹಣಾ ಮಂಡಳಿಯನ್ನು ನೇರವಾಗಿ ಸಂಪರ್ಕಿಸಿ ಮಾಹಿತಿ ಪರಿಶೀಲಿಸುವುದು ಉತ್ತಮ. ಅನಧಿಕೃತ ವೆಬ್‌ಸೈಟ್‌ಗಳಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ ಅಥವಾ ಬ್ಯಾಂಕ್ ವಿವರಗಳನ್ನು ಹಂಚಬೇಡಿ. ಯಾವುದೇ ಸಂಶಯಾಸ್ಪದ ವೆಬ್‌ಸೈಟ್ ಅಥವಾ ವಂಚನೆ ಪ್ರಯತ್ನ ಕಂಡುಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಸೈಬರ್ ಕ್ರೈಂ (www.cybercrime.gov.in) ದೂರು ನೀಡಿ ಎಂದು ಸೈಬರ್ ಪೊಲೀಸರು ಸಲಹೆ ನೀಡಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…