Headlines

ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು

ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ : ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಬೆಳಕಿಗೆ ತರಲು ಸಾಧ್ಯ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ಹೆಚ್ಚು ತೊಡಗಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗದಿದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಕ್ರೀಡಾಕೂಟ ಸಂದರ್ಭದಲ್ಲಿ ಶಿಕ್ಷಕರು ನ್ಯಾಯೋಚಿತ ತೀರ್ಪು ಕೊಡಬೇಕು. ನಿಮ್ಮ ತೀರ್ಪು ನ್ಯಾಯದ ಪರವಾಗಿದ್ದರೆ ಮಕ್ಕಳು ಭವಿಷ್ಯದಲ್ಲಿ ಇನ್ನಷ್ಟು ಆಸಕ್ತಿಯಿಂದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಯಾವುದೇ ಕಾರಣಕ್ಕೂ ಕ್ರೀಡಾ ಫಲಿತಾಂಶದಲ್ಲಿ ಪೋಷಕರು ಹಸ್ತಕ್ಷೇಪ ಮಾಡಬಾರದು. ಕ್ರೀಡಾಕೂಟ ನಡೆಯುವ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಉಪವಿಭಾಗಾಧಿಕಾರಿಗಳೂ ಸೇರಿದಂತೆ ತಹಶೀಲ್ದಾರ್, ಕಾರ್ಯನಿರ್ವಾಹಣಾಧಿಕಾರಿಗಳು ಸೇರಿ ಎಲ್ಲ ಅಧಿಕಾರಿಗಳು ಮೈದಾನದಲ್ಲಿದ್ದು ಮಕ್ಕಳನ್ನು ಪ್ರೋತ್ಸಾಹಿಸಬೇಕು ಸ್ಥಳದಲ್ಲಿ ಅಧಿಕಾರಿಗಳು ಹಾಜರಿಲ್ಲದೆ ಇರುವ ಬಗ್ಗೆ ಸಿಡಿಮಿಡಿಗೊಂಡ ಶಾಸಕರು ಇದೇವರ್ತನೆ ಮುಂದೊರೆದರೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮಕ್ಕೆ ಮುಂದಾಗಲು ಹೇಳುತ್ತೇನೆ ಎಂದರು.

ನೆಹರೂ ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕಾಗಿ 40 ಲಕ್ಷ ರೂ. ಮೀಸಲಿಟ್ಟಿದ್ದು, ಟೆಂಡರ್ ಪಡೆದ ಗುತ್ತಿಗೆದಾರ ಬರದೆ ಇರುವುದರಿಂದ ಕಾಮಗಾರಿ ವಿಳಂಬವಾಗಿದೆ. ಇನ್ನು ಒಂದು ವಾರದಲ್ಲಿ ನೆಹರೂ ಮೈದಾನದಲ್ಲಿ ವೇದಿಕೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಮಕ್ಕಳಿಗೆ ಕ್ರೀಡಾಚಟುವಟಿಕೆಗೆ ಬೇಕಾದ ಮೂಲಭೂತ ಸೌಲಭ್ಯ ಒದಗಿಸಲಾಗುತ್ತದೆ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಮಾತನಾಡಿ ಓದಿನ ಜೊತೆ ಕ್ರೀಡೆಯೂ ಮುಖ್ಯ. ದೈಹಿಕವಾಗಿ ಸದೃಢರಾಗಬೇಕಾದರೆ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಲ್ಲಿ ಸೋಲುಗೆಲುವು ಮಾಮೂಲಿ. ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆದ್ದಾಗ ಇತಿಹಾಸ ನಿರ್ಮಿಸಲು ಸಾಧ್ಯ. ಇಂತಹ ತಾಲ್ಲೂಕು ಮಟ್ಟದ ಕ್ರೀಡಾಕೂಟಗಳ ಮೂಲಕವೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲು ಅವಕಾಶ ಇರುತ್ತದೆ. ಮಕ್ಕಳು ಅಂತಹ ಅವಕಾಶಕ್ಕಾಗಿ ಉತ್ತಮವಾಗಿ ಸ್ಪರ್ಧೆ ಮಾಡಿ ಎಂದು ಸಲಹೆ ನೀಡಿದರು.

ನಗರಸಭೆ ಉಪಾಧ್ಯಕ್ಷೆ ಸವಿತಾ ವಾಸು, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್, ರವಿಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭೂಮೇಶ್, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಟಿ.ಪಿ., ಲಕ್ಷ್ಮಣ್ ಆರ್. ನಾಯ್ಕ್, ಎಸ್.ಆರ್.ಮಂಜುಪ್ಪ, ಓಂಕಾರಪ್ಪ, ಮಹಾಬಲೇಶ್ವರ ಜಿ. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರಮುಖರು ಹಾಜರಿದ್ದರು.

Exit mobile version