Headlines

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸದಸ್ಯರು ಪ್ರತಿಭಟನೆ ನಡೆಸಿದರು.

ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿಈ ರೀತಿ ಗೊಂದಲವಾಗುತ್ತಿದ್ದು, ಸರಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಖಾಲಿ ಇರುವ ಎಲ್ಲಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮಾಡಬೇಕು. ಸರಕಾರಿ ಕಾಲೇಜುಗಳ ಮೂಲ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಪ್ರಯೋಗಾಲಯ ಸಲಕರಣೆಗಳು, ಕಂಪ್ಯೂಟರ್‌, ಇನ್ನಿತರ ಸಲಕರಣೆಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಪದವಿ ತರಗತಿಗಳು ಆರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗಿಲ್ಲ, ಇದರಿಂದ ಸರಿಯಾದ ತರಗತಿಗಳು ನಡೆಯುತ್ತಿಲ್ಲ. ಬಡ, ಕೂಲಿ ಕಾರ್ಮಿಕರ ಮಕ್ಕಳು ಸರಕಾರಿ ಕ್ಯಾಂಪಸ್‌ಗಳಲ್ಲಿಅಧ್ಯಯನ ಮಾಡುವ ಉದ್ದೇಶದಿಂದ ದಾಖಲಾತಿ ಮಾಡಿರುತ್ತಾರೆ. ಆದರೆ ಪ್ರತಿ ವರ್ಷ ವಿಷಯ ಬೋಧನೆಗೆ ಉಪನ್ಯಾಸಕರು ಇಲ್ಲದೇ ಸಮಸ್ಯೆಯಾಗುತ್ತಿದೆ. ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ. ಶೇ.50ರಷ್ಟು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ಸರಕಾರಿ ಕಾಲೇಜುಗಳಲ್ಲಿಓದುವ ವಿದ್ಯಾರ್ಥಿಗಳಿಗೆ ಸರಕಾರ ಅನ್ಯಾಯ ಮಾಡುತ್ತಿದೆ. ಕೂಡಲೇ ರಾಜ್ಯ ಸರಕಾರ ಈ ಕುರಿತು ಗಂಭೀರವಾಗಿ ಪರಿಗಣಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹಿಸಿದರು.

ಈ ಸಂಧರ್ಭದಲ್ಲಿ ಎಬಿವಿಪಿ ತಾಲೂಕ್ ಸಂಚಾಲಕ ಪ್ರಮೋದ್ , ಜಿಲ್ಲಾ ಸಂಚಾಲಕ್ ಲೋಹಿತ್ ಹಾಗು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.