ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಇವತ್ತು ನೂರಕ್ಕು ಹೆಚ್ಚು ಡಿಜೆ ಸಿಸ್ಟಮ್ಗಳು ಅಳವಡಿಸಲಾಗಿತ್ತು , ಇನ್ನೊಂದೆಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರೆ ಡಿಜೆಗೆ ವಿರೋಧ ವ್ಯಕ್ತಪಡಿಸಿ ಭಿತ್ತಿ ಪತ್ರ ಪ್ರದರ್ಶಿಸಿದರು. ಇನ್ನೊಂದೆಡೆ ಭಾರಿ ಶಬ್ದ ಮಾಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ತಡೆದು ಸೌಂಡ್ ಆಫ್ ಮಾಡಿಸಿದ ಘಟನೆ ನಡೆಯಿತು.
ಶಿವಮೊಗ್ಗ ನಗರದಲ್ಲಿ ಇವತ್ತು ಅದ್ಧೂರಿಯ ಈದ್ ಮಿಲಾದ್ ಮೆರವಣಿಗೆ ನಡೆಯಿತು. ದೊಡ್ಡ ಸಂಖ್ಯೆಯ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಬಾರಿ ಈದ್ ಮೆರವಣಿಗೆಯಲ್ಲಿ ಡಿಜೆಗಳ ಅಬ್ಬರವೆ ಜೋರಿತ್ತು. ನೂರಕ್ಕಿಂತಲು ಹೆಚ್ಚು ವಾಹನಗಳಲ್ಲಿ ಸ್ಪೀಕರ್ಗಳು, ಡಿ.ಜೆ ಬಳಕೆ ಮಾಡಲಾಗಿತ್ತು.
ಮೆರವಣಿಗೆಯಲ್ಲಿ ಮಹಾರಾಷ್ಟ್ರದಿಂದ ತರಿಸಲಾಗಿದ್ದ ಡಿ.ಜೆ ವಾಹನ ತಡೆದ ಪೊಲೀಸರು ಮ್ಯೂಸಿಕ್ ಆಫ್ ಮಾಡಿಸಿದ ಘಟನೆಯು ನಡೆಯಿತು.
ನಿಗದಿಗಿಂತಲು ಹೆಚ್ಚು ಡೆಸಿಬಿಲ್ನ ಶಬ್ದ ಇದ್ದಿದ್ದರಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಆ ಡಿ.ಜೆ.ವಾಹನವನ್ನು ಡಿವೈಎಸ್ಪಿ ಕೃಷ್ಣಮೂರ್ತಿ ತಡೆದು ನಿಲ್ಲಿಸಿದರು. ಸ್ಥಳದಲ್ಲೇ ಇದ್ದ ಮುಸ್ಲಿಂ ಮುಖಂಡರ ಜೊತೆ ಚರ್ಚಿಸಿ ಮ್ಯೂಸಿಕ್ ಆಫ್ ಮಾಡಿಸಿದರು. ಆ ವಾಹನದ ಮ್ಯೂಸಿಕ್ ಸಿಸ್ಟಮ್ಗಳು ಬಂದ್ ಆಗಿಯೇ ಮೆರವಣಿಗೆಯಲ್ಲಿ ಸಾಗಿತು.
ಡಿಜೆ ವಿರುದ್ಧ ಭಿತ್ತಿ ಪತ್ರ ಪ್ರದರ್ಶನ
ಇನ್ನು, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಸಮುದಾಯದ ಯುವಕರಿಂದಲೇ ಡಿ.ಜೆ ಮತ್ತು ಡಾನ್ಸ್ಗೆ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಫ್ಲೇಕರ್ ಪ್ರದರ್ಶಿಸಿಕೊಂಡು ಮೆರವಣಿಗೆಯಲ್ಲಿ ಭಾಗಹಿಸಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್