ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ ಆರೋಪ !? – ತನಿಖೆಗೆ ಸಚಿವರ ಆದೇಶ

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ? – ತನಿಖೆಗೆ ಸಚಿವರ ಆದೇಶ

ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ (King Cobra) ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಜನ ಸಂಗ್ರಾಮ ಪರಿಷತ್‌ನ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡಕ್ಕೆ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.

ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಅವರು, ಕಾಳಿಂಗ ಸರ್ಪ ಸಂಶೋಧನೆ ಹೆಸರಿನಲ್ಲಿ ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರ (ಎಆರ್‌ಆರ್‌ಎಸ್) ಅಕ್ರಮ, ಕಾನೂನು ಉಲ್ಲಂಘನೆ ಹಾಗೂ ವಂಚನೆ ನಡೆಸುತ್ತಿದೆ ಎಂದು ದೂರು ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಕೇಂದ್ರದಲ್ಲಿನ ಎಲ್ಲಾ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ.

ಆರೋಪ ಪ್ರಕಾರ, ಸೋಮೇಶ್ವರ ಅಭಯಾರಣ್ಯದ ಕೇಂದ್ರ ಭಾಗದಲ್ಲಿರುವ ತಲ್ಲೂರು ಗ್ರಾಮದ ಸರ್ವೆ ನಂ.11ರಲ್ಲಿ ಎಆರ್‌ಆರ್‌ಎಸ್ ಅಕ್ರಮವಾಗಿ ಜಮೀನು ಖರೀದಿ ಮಾಡಿ ಕಟ್ಟಡ ನಿರ್ಮಾಣ ಮಾಡಿದೆ. ಸಂಶೋಧನೆಗೆ ಸಿಗುವ ಅವಧಿಯನ್ನು ಮೀರಿ ವರ್ಷವಿಡೀ ಛಾಯಾಗ್ರಹಣ ನಡೆಯುತ್ತಿದೆ. ಕಾಳಿಂಗ ಸರ್ಪಗಳ ಸೆರೆ, ರಕ್ಷಣೆ ಹೆಸರಲ್ಲಿ ಪರಿಶಿಷ್ಟರ ಮೇಲೆ ಶೋಷಣೆ ನಡೆಯುತ್ತಿದೆ ಎನ್ನಲಾಗಿದೆ.

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅರಣ್ಯ ಭೂಮಿ ಒತ್ತುವರಿ, ಅಭಯಾರಣ್ಯದೊಳಗೆ ವಾಣಿಜ್ಯ ಚಟುವಟಿಕೆ, ಪರಿಸರ ಸೂಕ್ಷ್ಮ ಪ್ರದೇಶದ ಭೂಮಿ ಖರೀದಿ – ಇವೆಲ್ಲ ಅರಣ್ಯ ಮತ್ತು ವನ್ಯಜೀವಿ ಕಾಯಿದೆಗಳ ನೇರ ಉಲ್ಲಂಘನೆ ಎಂದೂ ದೂರು ಉಲ್ಲೇಖಿಸಿದೆ.

ಇತ್ತೀಚೆಗಷ್ಟೇ ಕೊಡಗು ಸಮೀಪದಲ್ಲಿ ಮಹಾರಾಷ್ಟ್ರದ ಮೂವರು ಅಕ್ರಮವಾಗಿ ಕಾಳಿಂಗ ಸರ್ಪ ಹಿಡಿದು ಛಾಯಾಗ್ರಹಣ ಮಾಡುತ್ತಿದ್ದ ಪ್ರಕರಣ ದಾಖಲಾಗಿತ್ತು. ಇದೇ ಹಾದಿಯಲ್ಲಿ, ಆಗುಂಬೆಯ ಎಆರ್‌ಆರ್‌ಎಸ್ ಸಿಬ್ಬಂದಿ ಕಾಳಿಂಗ ಸರ್ಪ ಮತ್ತು ಮರಿಗಳನ್ನು ಅಕ್ರಮವಾಗಿ ತಮ್ಮ ಜಾಗದಲ್ಲಿ ಇಟ್ಟು, ವನ್ಯಜೀವಿ ಛಾಯಾಗ್ರಾಹಕರಿಗೆ ಫೋಟೋ ಹಾಗೂ ವಿಡಿಯೋ ಶೂಟ್ ವ್ಯವಸ್ಥೆ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

3 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

5 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

22 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

22 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

24 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago