ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸಾವು
ಸೊರಬ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿಯೊಂದು ಸಾವು ಕಂಡ ಘಟನೆ ಬುಧವಾರ ತಡ ರಾತ್ರಿ ಸೊರಬ-ಸಾಗರ ಮಾರ್ಗದಲ್ಲಿ ನಡೆದಿದೆ.
ತಾಲ್ಲೂಕಿನ ಅವಲುಗೋಡು ಬಳಿಯ ರಸ್ತೆಯಲ್ಲಿ ಅಂದಾಜು ಏಳುಬತಿಂಗಳ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದೆ. ವಿಷಯ ತಿಳಿದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮರೋಣೋತ್ತರ ಪರೀಕ್ಷೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ವೇಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಕುಳ್ಳೊಳ್ಳಿ, ಉಪ ವಲಯ ಅರಣ್ಯಾಧಿಕಾರಿ ಭದ್ರೇಶ್, ಉಳವಿಯ ಪಶು ವೈದ್ಯಾಧಿಕಾರಿ ಹಾಗೂ ಅರಣ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.