Headlines

RIPPONPETE | ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ

ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಗೆ ಮಳವಳ್ಳಿ ಮಂಜುನಾಥ್ ರಾಜೀನಾಮೆ

ಪ್ರಾಂಶುಪಾಲರ ಏಕಪಕ್ಷೀಯ ವರ್ತನೆ ವಿರೋಧಿಸಿ ಮಳವಳ್ಳಿ ಮಂಜುನಾಥ್ ರಾಜೀನಾಮೆ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಕಾಲೇಜು ಅಭಿವೃದ್ಧಿ ಸಮಿತಿಯ (CDC) ನಾಮ ನಿರ್ದೇಶಿತ ಸದಸ್ಯ ಸ್ಥಾನಕ್ಕೆ ಮಳವಳ್ಳಿ ಮಂಜುನಾಥ್ ಅವರು ದಿಡೀರ್ ರಾಜೀನಾಮೆ ನೀಡಿರುವ ಘಟನೆ ನಡೆದಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುನಾಥ್ ಅವರು, “ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಡಿಸಿ ಸಮಿತಿಯ ಕಾರ್ಯದರ್ಶಿ ವಿರೂಪಾಕ್ಷಪ್ಪ ಅವರು ಸಮಿತಿಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ನಮ್ಮಂತಹ ಸದಸ್ಯರ ಅಭಿಪ್ರಾಯ, ಸಲಹೆ ಹಾಗೂ ಶ್ರಮವನ್ನು ಗೌರವಿಸುವ ಬದಲು ನಿರ್ಲಕ್ಷಿಸುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಇದರಿಂದಾಗಿ ಸಮಿತಿಯೊಳಗೆ ಅಸಮಾಧಾನ ಮತ್ತು ಅಸೌಹಾರ್ದ ವಾತಾವರಣ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮುಂದುವರೆಯುವುದು ಸಾಧ್ಯವಿಲ್ಲವೆಂದು ಭಾವಿಸಿ ನಾನು ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ಅವರು ಮತ್ತಷ್ಟು ಮಾತನಾಡಿ, “ಸರ್ಕಾರಿ ಕಾಲೇಜುಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರಮುಖ ಸಂಸ್ಥೆಗಳು. ಇಲ್ಲಿ ನಡೆಯುವ ಪ್ರತಿಯೊಂದು ಕಾರ್ಯವೂ ಪಾರದರ್ಶಕವಾಗಿರಬೇಕು.ನಮ್ಮ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಕಾಲೇಜಿನ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ತಂದರೂ ಪ್ರಾಂಶುಪಾಲರಿಂದ ನಡೆಯುತ್ತಿರುವ ಏಕಪಕ್ಷೀಯ ನಿರ್ಧಾರಗಳು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿದೆ.ಸಿಡಿಸಿ ಸದಸ್ಯರ ಪಾತ್ರವನ್ನು ಕೇವಲ ಅಲಂಕಾರಿಕವಾಗಿ ಪರಿಗಣಿಸಿರುವುದರಿಂದ ನಿರಾಶೆಗೊಂಡಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಾನು ಹಿಂದೆ ಸರಿಯುತ್ತಿದ್ದೇನೆ” ಎಂದರು.

Exit mobile version