ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?

ಆರೋಪಿಗಳ ಪತ್ತೆಗೆ ಮೂರು ತಂಡ – ಎಸ್ ಪಿ ಮಿಥುನ್ ಕುಮಾರ್

ಪಾಕಿಸ್ತಾನ ಪರ ಘೋಷಣೆ; ಮತಾಂಧರ ಸೊಕ್ಕಿಗೆ ಕಾಂಗ್ರೆಸ್ ಸರ್ಕಾರದ ಒಲೈಕೆ ಕಾರಣ: ಕೆಎಸ್ ಈಶ್ವರಪ್ಪ ಕಿಡಿ

ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತದೆ.

ಸ್ವಯಂ ಪ್ರೇರಿತ ಪ್ರಕರಣ ದಾಖಲು: ‘ವಿಡಿಯೊ ಸಂಬಂಧ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವಿಡಿಯೊದ ಸತ್ಯಾಸತ್ಯತೆ ಪರಿಶೀಲಿಸಲಾಗುತ್ತಿದೆ. ಅದು ಎಲ್ಲಿ ಹಾಗೂ ಯಾವಾಗ ಚಿತ್ರೀಕರಣಗೊಂಡಿದೆ. ನೈಜತೆ ದೃಢಪಟ್ಟರೆ ಘೋಷಣೆ ಕೂಗಿದವರು ಯಾರು ಎಂಬುದರ ಬಗ್ಗೆಯೂ ತನಿಖೆ ನಡೆಸಿದ್ದೇವೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

“ವೈರಲ್ ವೀಡಿಯೋಗೆ ಸಂಬಂಧಿಸಿ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವೈರಲ್ ವಿಡಿಯೋವನ್ನು ಎಫ್‌ಎಸ್‌ಎಲ್ ಗೆ ಈಗಾಗಲೇ ಕಳುಹಿಸಲಾಗಿದೆ. ಯಾವಾಗ, ಯಾರು, ಎಲ್ಲಿ ಈ ವಿಡಿಯೋ ಮಾಡಿದ್ದಾರೆ ಎಂಬುದನ್ನು ಪರಿಶೀಲನೆ ಮಾಡುತ್ತಿದ್ದೇವೆ” ಎಂದು ಎಸ್ಪಿ ತಿಳಿಸಿದ್ದಾರೆ.

“ವಿಡಿಯೋದಲ್ಲಿ ಕಾಣಿಸುತ್ತಿರುವವರನ್ನು ಗುರುತಿಸುವ ಕೆಲಸ ಆಗುತ್ತಿದೆ. ವಿಡಿಯೋದಲ್ಲಿರುವವರ ಶೋಧಕ್ಕಾಗಿಯೇ ಒಂದು ಪೊಲೀಸ್ ತಂಡ ಕಾರ್ಯನಿರ್ವಹಿಸುತ್ತಿದೆ. ಎಲ್ಲವನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ರಾತ್ರಿ ಮೀಲಾದ್ ಮೆರವಣಿಗೆಯ ವೇಳೆ ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾದ ವೀಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಭದ್ರಾವತಿಯ ಓಲ್ಡ್ ಟೌನ್ ಪೊಲೀಸರು, ವಿಡಿಯೋ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಿದ್ದಾರೆ.

ಪಾಕಿಸ್ತಾನ ಪರ ಘೋಷಣೆ; ಮತಾಂಧರ ಸೊಕ್ಕಿಗೆ ಕಾಂಗ್ರೆಸ್ ಸರ್ಕಾರದ ಒಲೈಕೆ ಕಾರಣ: ಕೆಎಸ್ ಈಶ್ವರಪ್ಪ ಕಿಡಿ

ಈ ದೇಶದ ಅನ್ನ ತಿಂದು, ಗಾಳಿ ಉಸಿರಾಡಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗುವ ಮನಸ್ಥಿತಿಯ ಮುಸ್ಲಿಮರ ಇನ್ನು ಇಲ್ಲಿ ಬದುಕಿದ್ದಾರಲ್ಲ ಅದು ನಾಚಿಕೆಗೇಡು ಎಂದು ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ವೇಳೆ ಮುಸ್ಲಿಂ ಯುವಕರು ಗುಂಪು ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ ಈ ಸಂಬಂಧ ಸುವರ್ಣನ್ಯೂಸ್ ಪ್ರತಿನಿಧಿ ರಾಜೇಶ್ ಜೊತೆ ಮಾತನಾಡಿದ ಕೆಎಸ್ ಈಶ್ವರಪ್ಪ ಅವರು, ನಮ್ಮ ಬೆಂಬಲಕ್ಕೆ ಆಡಳಿತರೂಢ ಕಾಂಗ್ರೆಸ್ ಪಕ್ಷ ನಿಲ್ಲುತ್ತದೆ ಎಂಬ ದೇಶದ್ರೋಹಿ ಭಾವನೆ ಮತಾಂಧ ಮುಸ್ಲಿಂರಲ್ಲಿದೆ.

ಹೀಗಾಗಿ ಯಾವುದೇ ಕಾನೂನು ಪೊಲೀಸರ ಭಯವಿಲ್ಲದೇ ಈ ರೀತಿ ಪಾಕಿಸ್ತಾನ ಪರ ಘೋಷಣೆ ಕೂಗುವುದು, ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದ ವಿರುದ್ಧ ಕಿಡಿಕಾರಿದರು.

ನಮ್ಮ ದೇಶದ ಅನ್ನ ತಿಂದು ಪಾಕಿಸ್ತಾನ ಪರ ಘೋಷಣೆ ಕೂಗುವುದು ಸರಿಯಲ್ಲ. ಪಹಲ್ಗಾಂ ದಾಳಿ ವೇಳೆ ಇಡೀ ದೇಶ ಒಗ್ಗಟ್ಟಾಗಿತ್ತು. ಮುಸ್ಲಿಮರು ನರೇಂದ್ರ ಮೋದಿ ಮತ್ತು ಭಾರತದ ಪರ ನಿಂತಿದ್ದರು. ಇದೀಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ದೇಶದ್ರೋಹಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

5 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

7 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

24 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago