Headlines

ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ

ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ

ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು.

ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು ಬೆಳೆಸಲು ನೆರವಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಂ. ಶ್ರೀಕಾಂತ್ ಅವರು, ಕಾಂಗ್ರೆಸ್ ಪಕ್ಷವು ಸದಾ ಸರ್ವಧರ್ಮ ಸಮಭಾವದ ತತ್ವಕ್ಕೆ ಬದ್ಧವಾಗಿದ್ದು, ಈ ಕಾರ್ಯಕ್ರಮವು ಅದೇ ತತ್ವದ ಪ್ರತೀಕವಾಗಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಅವರು, ಪೈಗಂಬರ್ ಅವರ ಸಂದೇಶಗಳು ಇಂದಿಗೂ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುತ್ತಿದ್ದು, ಇಂತಹ ಸೌಹಾರ್ದ ಕಾರ್ಯಕ್ರಮಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗುತ್ತವೆ ಎಂದರು.

ಈ ಸಂದರ್ಭದಲ್ಲಿ ವಿವಿಧ ಧರ್ಮಗಳ ಗುರುಗಳು, ಮುಖಂಡರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಹಾಜರಿದ್ದರು.

Exit mobile version