Headlines

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!!

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!!

ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ.

ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ.

ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.

ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದ್ದು ಈ ಬಗ್ಗೆ ಶೀಘ್ರವೇ ಆಹಾರ ಇಲಾಖೆ ಸರ್ಕಾರಕ್ಕೆ ಈ ಬಗ್ಗೆ ಅಧಿಕೃತ ವರದಿ ಸಲ್ಲಿಸಲಿದೆ.

12 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಶಂಕಾಸ್ಪದ ಎಂದು ಗುರುತಿಸಿದ್ದ ರಾಜ್ಯದ ಆಹಾರ ಇಲಾಖೆ, ಇದೀಗ ಮಾನದಂಡ ಉಲ್ಲಂಘಿಸಿದ ಪಡೆದಿ ರುವ ಅನರ್ಹ ಬಿಪಿಎಲ್ ಕಾರ್ಡ್ಗಳಿಗೆ ಆಹಾ ರ ಇಲಾಖೆ, ಕಾರಣ ಕೇಳಿ ನೋಟಿಸ್ ಕೊಟ್ಟಿದೆ. ನೋಟಿಸ್ ತಲುಪಿದ ಮೂರು ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಲಿಖಿತ ಸಮಜಾ ಯಿಷಿ ನೀಡಬೇಕೆಂದು ಸೂಚಿಸಿದೆ.

ಸಮರ್ಪಕ ಸಮಜಾಯಿಷಿ ನೀಡದಿದ್ದರೆ ಕಾನೂನು ಕ್ರಮದ ಜತೆಗೆ ದುರುಪಯೋಗ ಪಡಿಸಿಕೊಂಡಿದ್ದ ಪಡಿತರ ಬಾಬಿನ ಪ್ರಮಾಣ ವನ್ನು ಮುಕ್ತ ಮಾರುಕಟ್ಟೆ ದರದಲ್ಲಿ ಲೆಕ್ಕಹಾಕಿ ವಸೂಲಿ ಮಾಡುವುದಾಗಿ ಇಲಾಖೆಯು ಅನರ್ಹ ಫಲಾನುಭವಿಗಳಿಗೆ ಎಚ್ಚರಿಕೆ ನೀಡಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವ ಯ ಬಿಪಿಎಲ್ ಹೊಂದಿರುವ ಫಲಾನುಭವಿಗಳ ನ್ನು ಗುರುತಿಸಲು ಸರ್ಕಾರ ಮಾನದಂಡ ನಿಗದಿ ಪಡಿಸಿದೆ. ಅದರಂತೆ, ವಿವಿಧ ಇಲಾಖೆಗಳ ದತ್ತಾಂಶಗಳನ್ನು ಪರಿಶೀಲಿಸಿದ್ದು, ಮಾನದಂಡಗಳಿಗೆ ವಿರುದ್ಧವಾಗಿರುವ ಶಂಕಿತ ಪಡಿತರಚೀಟಿಗಳನ್ನು ಗುರುತಿಸುವ ಕಾರ್ಯ ನಡೆ ಯುತ್ತಿದೆ ಎಂದು ನೋಟಿಸ್ನಲ್ಲಿ ಇಲಾಖೆ ಉಲ್ಲೇಖಿಸಿದೆ.

ಶಂಕಾಸ್ಪದ ಕಾರ್ಡ್ಗಳಿಗೆ ಪಡಿತರ ವಿತರಿಸದಂತೆ ನ್ಯಾಯಬೆಲೆ ಅಂಗಡಿಗಳಿಗೆ ಇಲಾಖೆ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ತಿಂಗಳಿಂದ ಶಂಕಾಸ್ಪದ ಕಾರ್ಡ್ ಫಲಾನುಭವಿಗಳಿಗೆ ಅಕ್ಕಿ ಹಂಚಿಕೆಯಾಗುವುದಿಲ್ಲ.