ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ
ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು 9 ಜಿಲ್ಲಾ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಈ ಕುರಿತು ಕ್ಲಬ್ ಅಧ್ಯಕ್ಷ ಕೆರೆಹಳ್ಳಿ ರಾಮಚಂದ್ರ ಅವರು ರಿಪ್ಪನ್‌ಪೇಟೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಮಾಜಸೇವೆಗೆ ಬದ್ಧವಾದ ಸಂಸ್ಥೆಯಾಗಿದ್ದು, ಕಳೆದ ಒಂದು ವರ್ಷದಲ್ಲಿ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಮಾಜಮುಖಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ. ಉಚಿತ ನೇತ್ರ ಶಿಬಿರ, ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರ, ರಕ್ತದಾನ ಶಿಬಿರ, ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ, ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ, ರೈತಮಿತ್ರ ಕಾರ್ಯಕ್ರಮ ಸೇರಿದಂತೆ ಹಲವು ಸಮಾಜಮುಖಿ ಚಟುವಟಿಕೆಗಳಿಂದ ಈ ಗೌರವ ದೊರೆತಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ರೋಟರಿ ಜಿಲ್ಲಾ 3182ರ ವಲಯ–11ರ ಅಸಿಸ್ಟೆಂಟ್ ಗವರ್ನರ್ ಎಂ.ಬಿ. ಲಕ್ಷ್ಮಣಗೌಡ ಮಾತನಾಡಿ, “ರಿಪ್ಪನ್‌ಪೇಟೆ ರೋಟರಿ ಸಂಸ್ಥೆ ಸ್ಥಾಪನೆಯಾದ 15 ವರ್ಷಗಳಿಂದ ನೂರಾರು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುವುದು, ಬಡಜನರ ಆರೋಗ್ಯಕ್ಕಾಗಿ ಉಚಿತ ಶಿಬಿರಗಳನ್ನು ಆಯೋಜಿಸುವುದು, ರೈತರಿಗಾಗಿ ಕೃಷಿ ಸಂಬಂಧಿತ ಕಾರ್ಯಕ್ರಮಗಳನ್ನು ರೂಪಿಸುವುದು ನಮ್ಮ ಪ್ರಮುಖ ಕಾರ್ಯಗಳಾಗಿವೆ. ಇದೇ ಕಾರಣಕ್ಕೆ ಈ ಬಾರಿ ನಮ್ಮ ರೋಟರಿ ಸಂಸ್ಥೆಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ ದೊರೆತಿದೆ” ಎಂದರು.
ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್‌ನ ಗಣೇಶ್ ಕಾಮತ್, ರಾಧಾಕೃಷ್ಣ ಹೆಚ್.ಎ., ರಾಧಾಕೃಷ್ಣ ಜೆ., ಡಾಕಪ್ಪ, ಹುಗುಡಿ ವರ್ತೇಶ್ ಗೌಡ, ಗಣೇಶ್ ಆರ್., ಸಬಾಸ್ಟಿನ್ ಮತ್ತಿತರರು ಉಪಸ್ಥಿತರಿದ್ದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…