January 11, 2026

ರಿಪ್ಪನ್‌ಪೇಟೆ : ಈದ್ ಮಿಲಾದ್ ಅಂಗವಾಗಿ ನಾಳೆ(17-09-2025) ಸೌಹಾರ್ದ ಸಂಗಮ

GridArt_20250916_211104643

ರಿಪ್ಪನ್‌ಪೇಟೆ : ಈದ್ ಮಿಲಾದ್ ಅಂಗವಾಗಿ ನಾಳೆ(17-09-2025) ಸೌಹಾರ್ದ ಸಮಾವೇಶ

ರಿಪ್ಪನ್‌ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಬುಧವಾರ ಸೌಹಾರ್ದ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ಅಫ಼್ಜಲ್ ಬ್ಯಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬುಧವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS ಹಾಗೂ SSF ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರವಾದಿಯವರ 1500ನೇ ಜನ್ಮ ದಿನದ ಪ್ರಯುಕ್ತ ಹುಬ್ಬುನ್ನಬಿ ಮಿಲಾದ್ ಕಾನ್ಪರೆನ್ಸ್ ಅಂಗವಾಗಿ ಸೌಹಾರ್ಧ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಾಗರ – ಹೊಸನಗರ ವಿಧಾ‌ನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ , ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ,ಉದ್ಯಮಿ ಮಹೇಂದ್ರ ಎಂ , ಧರ್ಮಗುರುಗಳು, ಮುಖಂಡರು , ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

About The Author