ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ
ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ₹80 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ.
2022ರಲ್ಲಿ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿ ನಂತರ ಆಕೆಯನ್ನು ಮದುವೆಯಾಗಿದ್ದ. ಈ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಿಸಲಾಗಿತ್ತು.
ತನಿಖಾಧಿಕಾರಿ ಅಭಯಪ್ರಕಾಶ್ ಸೋಮನಾಳ ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿಯಿಂದ ₹80 ಸಾವಿರ ದಂಡದ ಮೊತ್ತ ಪಡೆದು ನೊಂದ ಬಾಲಕಿಗೆ ನೀಡುವಂತೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸಂತ್ರಸ್ತ ಬಾಲಕಿಗೆ ₹4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…