Headlines

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

ಶಿವಮೊಗ್ಗ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಶ್ವೇತಾ ಬಂಡಿ ರವರ ಅಧಿಕಾರ ಸ್ವೀಕಾರ ಸಮಾರಂಭ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಬಂಜಾರ ಭವನದಲ್ಲಿ ಜರುಗಲಿದೆ.

​’ಸಮರ್ಥ ನಾಯಕತ್ವದ ಕಡೆಗೆ ನೂತನ ಪದಾಧಿಕಾರಿಗಳ ಹೆಜ್ಜೆ’ ಎಂಬ ಧ್ಯೇಯದಡಿ ಈ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್‌ನ ಹಿರಿಯ ನಾಯಕರು, ಜನಪ್ರತಿನಿಧಿಗಳು ಮತ್ತು ಸಾವಿರಾರು ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಮಹಿಳಾ ಸಬಲೀಕರಣ, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಮಹಿಳೆಯರ ಸಕ್ರಿಯ ಪಾತ್ರದ ಕುರಿತು ಗಣ್ಯರು ಮಾತನಾಡಲಿದ್ದಾರೆ. ಶ್ವೇತಾ ಬಂಡಿ ಅವರ ನೇತೃತ್ವವು ಜಿಲ್ಲಾ ಮಹಿಳಾ ಕಾಂಗ್ರೆಸ್‌ನಲ್ಲಿ ಹೊಸ ಚೈತನ್ಯ ಮೂಡಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಕಾರ್ಯಕ್ರಮಕ್ಕೆ ಎಲ್ಲರೂ ಭಾಗವಹಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕ ಆಹ್ವಾನಿಸಿದೆ.