Headlines

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ

ಸಾಗರ: “ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ಅವರಿಗೆ ಈ ನೆಲದಲ್ಲಿ ಬದುಕುವ ಹಕ್ಕಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಕೃತ್ಯ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಈ ಕುರಿತು ನಾನು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ” ಎಂದರು.

ಎಲ್ಲ ಧರ್ಮದಲ್ಲಿಯು ಕಿಡಿಗೇಡಿಗಳಿರುತ್ತಾರೆ. ಅಂತಹವರನ್ನು ಗುರುತಿಸಿ ಸಮಾಜ ಬಾಂಧವರು ದೂರ ಇರಿಸಬೇಕು. ಇಲ್ಲವಾದಲ್ಲಿ ಒಬ್ಬಿಬ್ಬರು ಮಾಡುವ ಕಿಡಿಗೇಡಿ ಕೃತ್ಯ ಇಡೀ ಸಮಾಜಕ್ಕೆ ಕೆಟ್ಟ ಹೆಸರು ತರಲಿದೆ.

ಅವರು ಮುಂದುವರೆದು, “ಎಲ್ಲಾ ಧರ್ಮದಲ್ಲೂ ಕಿಡಿಗೇಡಿಗಳು ಇರಬಹುದು. ಸಮಾಜವು ಅಂತಹವರನ್ನು ಗುರುತಿಸಿ ದೂರವಿರಬೇಕು. ಇಲ್ಲವಾದಲ್ಲಿ ಕೆಲವರ ಕೃತ್ಯದಿಂದಲೇ ಸಂಪೂರ್ಣ ಸಮಾಜಕ್ಕೆ ಕೆಟ್ಟ ಹೆಸರು ಬರುವುದು ಅನಿವಾರ್ಯ” ಎಂದು ಹೇಳಿದರು.

ಸಾಗರದಲ್ಲಿ ಇಬ್ಬರು ಮಕ್ಕಳು ಉಗುಳಿರುವ ಪ್ರಕರಣ ಸಂಬಂಧ ಅವರ ತಾಯಿ ಕ್ಷಮಾಪಣೆ ಕೇಳಿದ್ದಾರೆ. ಈ ಕೃತ್ಯದ ಹಿಂದೆ ಯಾರಾದರು ಇದ್ದಾರೆಯೆ ಎಂದು ತನಿಖೆ ನಡೆಸುವಂತೆ ಡಿವೈಎಸ್‌ಪಿ ಅವರಿಗೆ ತಿಳಿಸಲಾಗಿದೆ ಎಂದರು.

Exit mobile version