POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

GridArt 20250928

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.

ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್‌ನಲ್ಲಿ ಬಂದಿದ್ದರು. ಅಲ್ಲಿಂದ ಟೆಂಪೋ ಟ್ರಾವೆಲರ್ (TT) ವಾಹನವೊಂದನ್ನ ಬುಕ್ ಮಾಡಿಕೊಂಡು ಸಿಗಂದೂರಿಗೆ ಹೊರಟಿದ್ದರು.

ಕೂರನಕೊಪ್ಪ ಗ್ರಾಮದ ಬಳಿ ಟಿಟಿ ಪಲ್ಟಿಯಾಗಿದೆ ವಾಹನದಲ್ಲಿ ಪ್ರಯಾಣಿಸುತ್ತಿದ್ದ 12 ಮಹಿಳೆಯರು ಮತ್ತು ಚಾಲಕ ಸೇರಿ ಒಟ್ಟು 13 ಮಂದಿ ಇದ್ದರು..ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.

ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಘಟನೆ ನಡೆದ ಈ ಘಟನೆಯಲ್ಲಿ ಮೂವರು ಗಂಭೀರವಾಗಿದ್ದಿದ್ದು, ಆತನಿಗೆ ಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಶಿವಮೊಗ್ಗದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.,

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.