Headlines

HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು

HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು

ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಪೂರ್ಣೇಶ್ (22) ಮೃತ ದುರ್ಧೈವಿ. ಅದೃಷ್ಟವಶಾತ್ ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.

ಕಾಲು ಸಂಕ ನಿರ್ಮಾಣ ಮಾಡುವಂತೆ 20 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version