ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ
ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ವರ್ಷದ ಬಾಲಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಶನಿವಾರ ಸಂಜೆ ನಡೆದಿದೆ.
ಷಣ್ಮುಖ ಎಂಬುವವರ ಪುತ್ರ ವಿನಯ್ (2) ಮೃತ ದುರ್ದೈವಿ.
ಮಗು ಮನೆಯ ಎದುರಿನ ರಸ್ತೆಯ ಬದಿಯಲ್ಲಿ ಆಟವಾಡುತಿದ್ದ ಸಮಯದಲ್ಲಿ ಕೋಟೆ ಗಂಗೂರು ದಿಕ್ಕಿನಿಂದ ಸಾಗರದತ್ತ ಬರುತ್ತಿದ್ದ ಕಾರು ಅಕಸ್ಮಾತ್ತಾಗಿ ಮಗುವಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮಗುವಿನ ಕಾಲು, ಮೈ ಹಾಗೂ ಕೈಗಳಿಗೆ ಭಾರೀ ಪೆಟ್ಟು ತಗುಲಿತ್ತು. ಸ್ಥಳೀಯರು ತಕ್ಷಣ ಮಗುವನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಘಟನೆಯಿಂದ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣ ಮೂಡಿದೆ. ಮಗು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರು ಶೋಕಸಮುದ್ರದಲ್ಲಿ ಮುಳುಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…