ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ
ರಿಪ್ಪನ್‌ಪೇಟೆ: ಪಟ್ಟಣದ ಹೊಸನಗರ ರಸ್ತೆಯ ಖಾಸಗಿ ಲಾಡ್ಜ್ ಪಕ್ಕದ ಖಾಲಿ ಜಾಗದಲ್ಲಿ ಒಬ್ಬ ಪುರುಷನ ಶವ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಗವಟೂರು ಸಮೀಪದ ಮಲ್ಲಾಪುರ ಗ್ರಾಮದ ನಿವಾಸಿ ರಾಜು ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೀವ್ರ ಮದ್ಯ ವ್ಯಸನಿಯಾಗಿದ್ದು, ಸೋಮವಾರ ರಾತ್ರಿ ಮದ್ಯಪಾನ ಮಾಡಿದ ನಂತರ ಹೊಸನಗರ ರಸ್ತೆಯ ಬದಿಯಲ್ಲಿ ಮಲಗಿದ್ದರೆಂದು ತಿಳಿದುಬಂದಿದೆ.
ಮದ್ಯದ ಪರಿಣಾಮ ಹಾಗೂ ಲೋ ಬಿಪಿ ಕಾರಣದಿಂದ ಅವರು ರಾತ್ರಿ ವೇಳೆ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
