ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ
ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಆನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ `ಚಂಡಿಕಾ ಹೋಮ’ಇನ್ನಿತರ ಪೂಜಾ ಕೈಂಕರ್ಯಗಳು ಸಂಭ್ರಮಾಚರಣೆಯೊಂದಿಗೆ ಸಂಪನ್ನಗೊಂಡಿತು.
ದೇವಸ್ಥಾನದ ಪ್ರಧಾನ ಅರ್ಚಕ ಗುರುರಾಜ ಭಟ್ ಇವರ ನೇತೃತ್ವದಲ್ಲಿ ನಿತ್ಯ ಅಮ್ಮನವರ ಸನ್ನಿಧಾನದಲ್ಲಿ ಚಂಡಿಕಾ ಪಾರಾಯಣ ಮತ್ತು ವಿಶೇಷ ಪೂಜಾ ಕಾರ್ಯಗಳು ನಡೆದು ವಿಜಯ ದಶಮಿಯಂದು ಲೋಕಕಲ್ಯಾಣಾರ್ಥವಾಗಿ “ಚಂಡಿಕಾ ಹೋಮ’’ ನಂತರ ತೀರ್ಥಪ್ರಸಾದ ವಿತರಣೆ ಹಾಗೂ ಸಾಮೂಹಿಕ ಅನ್ನ ಸಂತರ್ಪಣೆ ಸಂಜೆ ಸಿದ್ದಿವಿನಾಯಕ ಸ್ವಾಮಿಯ ರಥೋತ್ಸವ ಜರುಗಿತು.
ಶ್ರೀ ಸ್ವಾಮಿಯ ರಥೋತ್ಸವವು ದೇವಸ್ಥಾನದಿಂದ ಹೊರಟು ಹಿಂಭಾಗದ ಬನ್ನಿ ಮಂಟಪಕ್ಕೆ ತೆರಳಿ ಬನ್ನಿ ಗಿಡಕ್ಕೆ ಪೂಜೆ ಸಲ್ಲಿಸಿ ದೇವಸ್ಥಾನದ ಧರ್ಮದರ್ಶಿ ಸಮಿತಿಯವರು ಅಂಭುಛೇದನಗೊಳಿಸಿ ಬನ್ನಿ ಪತ್ರೆಯನ್ನು ಪರಸ್ಪರ ವಿನಮಯ ಮಾಡಿಕೊಳ್ಳುವುದರೊಂದಿಗೆ ಬನ್ನಿಕೊಟ್ಟು ಬಂಗಾರದಂತಾಗಲಿ ಎಂದು ಶುಭಹಾರೈಸಿಕೊಂಡ ದೃಶ್ಯ ವಿಶೇಷವಾಗಿತು.
ನಂತರ ಉತ್ಸವವು ವಿನಾಯಕ ವೃತ್ತದವರೆಗೆ ತೆರಳಿ ವಾಪಾಸ್ಸು ದೇವಸ್ಥಾನಕ್ಕೆ ಮರಳಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮದರ್ಶಿ ಸಮಿತಿಯವರು ಭಕ್ತ ಸಮೂಹ ಪಾಲ್ಗೊಂಡಿದ್ದರು.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…