January 11, 2026

ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

ಲಾರಿ ಬೈಕ್ ನಡುವೆ ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.

ವೇಗವಾಗಿ ಬಂದ ಲಾರಿ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.

ಪರಿಣಾಮ ಬೈಕ್‌ನಲ್ಲಿದ್ದ ಯುವಕರಲ್ಲಿ ಪುನೀತ್ (22) ಎಂಬ ದುರ್ದೈವಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವ ಯುವಕ ರಾಜೀವ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. 

About The Author