ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ
Car falls into ravine after hitting bus – one dead, three injured
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ.
ಕಾರು ಚಲಾಯಿಸುತ್ತಿದ್ದ ಮಂಡೋಡಿ ಗ್ರಾಮದ ಹರಿ ಭಟ್ ( 76) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ.
ಮೃತರ ಪತ್ನಿ ಕಮಲಾಕ್ಷಿ, ಸುಜಾತಾ ಮತ್ತು ಲೀಲಾವತಿ ಎಂಬುವವರ ಜೊತೆಗೆ ಕಾರಿನಲ್ಲಿ ಹೊಸನಗರ ತಾಲೂಕಿನ ನಿಟ್ಟೂರಿನಿಂದ ಮತ್ತಿಕೈ ಗ್ರಾಮಕ್ಕೆ ತೆರಳುತ್ತಿದ್ದಾಗ ಶಿವಮೊಗ್ಗದಿಂದ ಸಿಗಂದೂರಿಗೆ ತೆರಳುತಿದ್ದ ಭಾಗ್ಯಲಕ್ಷ್ಮಿ ಬಸ್ ಗೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ನಡೆದಿದೆ.
ನಿಟ್ಟೂರು – ನಾಗೋಡಿ ಸಮೀಪದ ಮಡೋಡಿ ಗ್ರಾಮದ ಬಳಿ ಹರಿ ಭಟ್ ಅವರು ಚಲಾಯಿಸುತ್ತಿದ್ದ ಕಾರು ಭಾಗ್ಯಲಕ್ಷ್ಮಿ ಬಸ್ಸಿನ ಮಧ್ಯ ಭಾಗಕ್ಕೆ ಡಿಕ್ಕಿಯಾಗಿದೆ. ಈ ವೇಳೆ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿನತ್ತ ಸಾಗಿ ಹಲವು ಬಾರಿ ಪಲ್ಟಿಯಾಗಿದೆ. ಈ ಸಂದರ್ಭ ಹರಿ ಭಟ್ ಅವರಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.
ಪತ್ನಿ ಕಮಲಾಕ್ಷಿ, ಸುಜಾತಾ ಮತ್ತು ಲೀಲಾವತಿ ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್